ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ: ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ: ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡ ಘಟನೆ ಚಿಬಿದ್ರೆ ಗ್ರಾಮದ ಮುಕ್ಕುಡ ಎಂಬಲ್ಲಿ ಎ.17 ರಂದು ನಡೆದಿದೆ.

ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಅನುಮತಿ ಇಲ್ಲದೆ ಅಕ್ರಮವಾಗಿ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ವಿಚಾರ ಅಧಿಕಾರಿಗಳಿಗೆ ಲಭಿಸಿದ್ದು, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ. ದಾಳಿ ವೇಳೆ ಕಡಿದು ಹಾಕಿದ ಹಲಸು, ಮರುವ , ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ರೂ ಆಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರAದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ ಡಿ ಆರ್ ಎಫ್ ಒ ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!