ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಸಾವು: 10 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ

ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಸಾವು: 10 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ

ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಮೇ.03ರ ಸಂಜೆ ಸಿಡಿಲು ಬಡಿದು ನವವಿವಾಹಿತ ಸಾವನ್ನಪ್ಪಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಸುಬ್ರಹ್ಮಣ್ಯದ ಪರ್ವತಮುಖಿ ಪ್ರದೇಶದಲ್ಲಿ ಮಳೆಯಾಗಿದ್ದು ಇದಕ್ಕೂ ಮುನ್ನ ಗಾಳಿ, ಗುಡುಗು ಆರಂಭಗೊಂಡಿತ್ತು. ಈ ವೇಳೆ ಮನೆಯಂಗಳದಲ್ಲಿ ಒಣಗಲು ಹಾಕಲಾಗಿದ್ದ ಅಡಕೆಯನ್ನು ಸೋಮಸುಂದರ್ (34) ಅವರು ತೆಗೆಯಲು ಮುಂದಾಗಿದ್ದು, ಆಗಲೇ ಅವರಿಗೆ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

10 ದಿನಗಳ ಹಿಂದೆಯಷ್ಟೇ ಸೋಮಸುಂದರ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಆದರೆ ನಿನ್ನೆ ಅಚಾನಕ್ಕಾಗಿ ಸಿಡಿಲು ಬಡಿದು ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!