ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಐರಾವತ ಎಸಿ ಸ್ಲೀಪರ್ ಬಸ್ ನಲ್ಲಿ ಬೆಂಕಿ: ಸುಟ್ಟು ಕರಕಲಾದ ಬಸ್: 40 ಪ್ರಯಾಣಿಕರು ಬಚಾವ್

ಐರಾವತ ಎಸಿ ಸ್ಲೀಪರ್ ಬಸ್ ನಲ್ಲಿ ಬೆಂಕಿ: ಸುಟ್ಟು ಕರಕಲಾದ ಬಸ್: 40 ಪ್ರಯಾಣಿಕರು ಬಚಾವ್

ಚಿಕ್ಕಮಗಳೂರು: ಸರ್ಕಾರಿ ಐರಾವತ ಬಸ್‌ನಲ್ಲಿ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮೇ.14ರಂದು ಮುಂಜಾನೆ ಸಂಭವಿಸಿದೆ.

ಡ್ರೈವರ್-ಕಂಡಕ್ಟರ್ ಸೇರಿ 40 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಐರಾವತ ಎಸಿ ಸ್ಲೀಪರ್ ಬಸ್ ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನೇರಲಕೆರೆ ಕ್ರಾಸ್ ಬಳಿ ಬಸ್ ತಲುಪಿದಾಗ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಚಾಲಕ-ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಿದರು.

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೂ ಬಸ್ ಶೇ. 90ರಷ್ಟು ಸುಟ್ಟು ಕರಕಲಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!