ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ, ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು:ಮಂಗಳೂರು ಆಸ್ಪತ್ರೆಯಿಂದ ಹಿಂದಿರುಗುತಿದ್ದ ವೇಳೆ ನಡೆದ ದುರ್ಘಟನೆ:

ಹಾಸನ, ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು:ಮಂಗಳೂರು ಆಸ್ಪತ್ರೆಯಿಂದ ಹಿಂದಿರುಗುತಿದ್ದ ವೇಳೆ ನಡೆದ ದುರ್ಘಟನೆ:

 

 

 

ಹಾಸನ:ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರೊಬ್ಬರನ್ನು ನೋಡಿ ಹಿಂದಿರುಗುತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಎಂಬಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ಹೊಸಕೋಟೆ ತಾಲೂಕಿನ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ ರಾಕೇಶ್   ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು  ಕಾರಿನಲ್ಲಿ ತೆರಳಿದ್ದು . ಮಂಗಳೂರಿನಿಂದ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು. ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!