ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಲ್ಲೆ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
ನಾಯಕನ ಅಗಲಿಕೆಗೆ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.