ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವೇಷ ಕಳಚಿ ಬಣ್ಣ ತೆಗೆಯುತ್ತಿರುವಾಗಲೇ ಹೃದಯಾಘಾತ!: ಧರ್ಮಸ್ಥಳ ಯಕ್ಷಗಾನ ಮೇಳದ ಹಿರಿಯ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚಿ ಬಣ್ಣ ತೆಗೆಯುತ್ತಿರುವಾಗಲೇ ಹೃದಯಾಘಾತ!: ಧರ್ಮಸ್ಥಳ ಯಕ್ಷಗಾನ ಮೇಳದ ಹಿರಿಯ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ಪುತ್ತೂರು: ಯಕ್ಷಗಾನ ಪ್ರದರ್ಶನ ಮುಗಿಸಿ ವೇಷ ಕಳಚಿ ಬಣ್ಣ ತೆಗೆಯುತ್ತಿದ್ದ ವೇಳೆ ಯಕ್ಷಗಾನ ಕಲಾವಿದರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮೇ.01ರಂದು ರಾತ್ರಿ ಕೋಟದಲ್ಲಿ ಸಂಭವಿಸಿದೆ.

ಕೋಟದ ಗಾಂಧಿ ಮೈದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನವನ್ನು ಆಯೋಜನೆ ಮಾಡಲಾಗಿತ್ತು. ಕುಕ್ಕಿತ್ತಾಯ ವೇಷ ತೊಟ್ಟಿದ್ದ ಹಿರಿಯ ಕಲಾವಿದ ಪುತ್ತೂರು ಗಂಗಾಧರ(59) ಅವರು ರಾತ್ರಿ 12.25ಕ್ಕೆ ಮುಖದ ಬಣ್ಣ ತೆಗೆಯುತಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಕಳೆದ 4 ದಶಕಗಳಿಗಿಂತಲೂ ಹೆಚ್ಚು ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಇವರು ಹಿರಿಯ ಕಲಾವಿದರಾಗಿ ವಿವಿಧ ಪಾತ್ರಗಳಿಗೆ ಜೀವತುಂಬಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!