ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಹಲ್ಲೆಗೈದ ಪಶು ವೈದ್ಯ: ಪಟ್ರಮೆ ನಿವಾಸಿ ಕೃಷ್ಣ  ಸ್ಥಳದಲ್ಲೇ ಸಾವು;

ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಹಲ್ಲೆಗೈದ ಪಶು ವೈದ್ಯ: ಪಟ್ರಮೆ ನಿವಾಸಿ ಕೃಷ್ಣ  ಸ್ಥಳದಲ್ಲೇ ಸಾವು;

 

 

ಬೆಳ್ತಂಗಡಿ: ಮದ್ಯದ ನಶೆ ಏರಿದ ಪಶು ವೈದ್ಯರೊಬ್ಬರು ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ‌ ಮೇ 13ರಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಆಸ್ಪತ್ರೆಯಿಂದ‌ ಡಿಸ್ಚರ್ಜ್ ಆಗಿ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದ ಕೃಷ್ಣ ಅವರು ಕೊಕ್ಕಡದಲ್ಲಿ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದಂತೆ ಕೊಕ್ಕಡ ಜಂಕ್ಷನ್ ಬಳಿ‌ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುವೈದ್ಯ ಡಾ.ಕುಮಾರ್ ಎಂಬವರು ಏಕಾಏಕಿ ಕೃಷ್ಣ ಅವರ ಕೆನ್ನೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಪಶುವೈದ್ಯರ ಏಟಿನ ಹೊಡೆತಕ್ಕೆ ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!