ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಸಂತ ಬಂಗೇರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮನ: ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ:

ವಸಂತ ಬಂಗೇರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮನ: ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ:

 

 

 

ಬೆಳ್ತಂಗಡಿ: ತಾಲೂಕಿನ  ಮಾಜಿ ಶಾಸಕ ವಸಂತ ಬಂಗೇರ ಅವರ ಮೃತ ದೇಹ ಬೆಂಗಳೂರಿನಿಂದ ಇಂದು ಮುಂಜಾನೆ ಚಾರ್ಮಾಡಿಯ ಮೂಲಕ ಬೆಳ್ತಂಗಡಿ ಹಳೇಕೋಟೆಯಲ್ಲಿರುವ ಅವರ ಸ್ವಗೃಹ "ಸುಪ್ರಭಾತ" ಕ್ಕೆ ತರಲಾಗಿದೆ. ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಬಸ್ ನಿಲ್ದಾಣ ಸೇರಿದಂತೆ ಪೇಟೆಯ ಮುಖ್ಯ ರಸ್ತೆಯಲ್ಲಿ ಅಂತಿಮ ಯಾತ್ರೆ ಸಾಗಿ ನಂತರ ಅಂತ್ಯ ಸಂಸ್ಕಾರ ವಿದಿವಿಧಾನಗಳು ನಡೆಯಲಿದೆ. ಬಂಗೇರ ಅವರ ನಿಧನಕ್ಕೆ ಗಣ್ಯರು ಸೇರಿದಂತೆ ಇಡೀ ತಾಲೂಕಿನ ಜನ ಕಂಬನಿ ಮಿಡಿದಿದ್ದು ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿಗಳು, ಸಚಿವರುಗಳು, ಶಾಸಕರುಗಳು, ಗಣ್ಯರು ಸೇರಿದಂತೆ ಸಾವಿರಾರೂ ಜನ ಸೇರುವ ನಿರೀಕ್ಷೆ ಇದ್ದು ಇದಕ್ಕಾಗಿ ಸಕಲ ಸಿದ್ಧತೆಗಳು ತಾಲೂಕು ಕ್ರೀಡಾಂಗಣದಲ್ಲಿ  ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!