ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಾಮೀನು ನಿರಾಕರಣೆ ಬೆನ್ನಲ್ಲೇ ,ರೇವಣ್ಣ ಎಸ್ ಐ ಟಿ ಅಧಿಕಾರಿಗಳ ವಶಕ್ಕೆ:

ಜಾಮೀನು ನಿರಾಕರಣೆ ಬೆನ್ನಲ್ಲೇ ,ರೇವಣ್ಣ ಎಸ್ ಐ ಟಿ ಅಧಿಕಾರಿಗಳ ವಶಕ್ಕೆ:

 

 

ಬೆಂಗಳೂರು: ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​.ಡಿ. ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿದ್ದ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದೆ. ಜಾಮೀನು ನಿರಾಕರಣೆಯಾಗುತ್ತಿದ್ದಂತೆ ದೇವೇಗೌಡರ ನಿವಾಸಕ್ಕೆ ಹೆಚ್​.ಡಿ. ರೇವಣ್ಣ ಭೇಟಿ‌ ನೀಡಿದ್ದರು. 5-6 ಅಧಿಕಾರಿಗಳ ಎಸ್​ಐಟಿ ತಂಡ ಅಲ್ಲಿಗೆ ತೆರಳಿ ರೇವಣ್ಣರನ್ನು ವಶಕ್ಕೆ ಪಡೆದಿದೆ.ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಹೆಚ್​.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿ ತೀರ್ಪು ನೀಡಿತ್ತು. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೇ‌ 6ಕ್ಕೆ ನ್ಯಾಯಾಲಯವು ಮುಂದೂಡಿದೆ. ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಮಹಿಳೆ ಅಪಹರಣ ಕುರಿತಂತೆ ದೂರು ದಾಖಲಾಗಿತ್ತು. ಸಂತ್ರಸ್ತೆಯ ಪುತ್ರ ನನ್ನ ತಾಯಿ ಅಪಹರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದಾಖಲಾಗಿರುವ ಪ್ರಕರಣಗಳ ವಿಚಾರಣೆಗಾಗಿ ಎಸ್ಐಟಿ ರೇವಣ್ಣ ಅವರಿಗೆ ನೋಟಿಸ್​ ನೀಡಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!