ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯ ನೇಮಕ?: ವಿಹೆಚ್‌ಪಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಗರಂ: ‘ಏಸುರಾಜ್’ ಯಾರೆಂದು ಸ್ಪಷ್ಟ ಪಡಿಸಿದ ದಾಖಲೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯ ನೇಮಕ?: ವಿಹೆಚ್‌ಪಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಗರಂ: ‘ಏಸುರಾಜ್’ ಯಾರೆಂದು ಸ್ಪಷ್ಟ ಪಡಿಸಿದ ದಾಖಲೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ವಿಎಚ್‌ಪಿ ಹಾಗೂ ಹಿಂದೂ ಪರ ಸಂಘಟನೆಗಳು ಮಾಡಿದ್ದ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನೂತನ ಎಇಒ ಆಗಿ ಏಸುರಾಜ್ ಎಂಬವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿ, ಏಸುರಾಜ್ ಅವರು ಹಿಂದೂವೇ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ನರೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.

ಇದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು ‘ಇದು ಬಿಜೆಪಿಯ ಮತ್ತೊಂದು ಫೇಕ್ ವಾಟ್ಸ್ ಆಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಒ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಬಿಜೆಪಿಯವರು ವ್ಯಾಪಕವಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಕರ್ನಾಟಕ ಬಿಜೆಪಿಯ ಮತ್ತೊಂದು ಸುಳ್ಳು ಹಬ್ಬಿಸುವ ಸೋಷಿಯಲ್ ಮೀಡಿಯಾ ವಾಟ್ಸ್ ಆಪ್ ಫೇಕ್ ಯುನಿವರ್ಸಿಟಿಯ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ’ ಎಂದು ದಾಖಲೆಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!