ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಸಾವು: ಧರ್ಮಸ್ಥಳ ಸಮೀಪದ ಮುಳಿಕ್ಕಾರ್ ಎಂಬಲ್ಲಿ ದುರ್ಘಟನೆ:

ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಸಾವು: ಧರ್ಮಸ್ಥಳ ಸಮೀಪದ ಮುಳಿಕ್ಕಾರ್ ಎಂಬಲ್ಲಿ ದುರ್ಘಟನೆ:

 

 

 

 

ಬೆಳ್ತಂಗಡಿ: ಮನೆ ಬಳಿಯ ಕೆರೆಗೆ ಬಿದ್ದು ಮಗು ಸಾವನ್ನಪ್ಪಿದ ದುರಂತ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ಎಂಬಲ್ಲಿ ಮೇ 02 ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿಯ ನಿವಾಸಿ ಜಗದೀಶ್ ಅವರ ಪುತ್ರ ಒಂದು ವರ್ಷ ಒಂಬತ್ತು ತಿಂಗಳ ಪ್ರಣಿತ್ ಕುಮಾರ್ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟದ ಕಡೆ ಹೋಗುವಾಗ ಆಗಾಗ ಮಗುವನ್ನು ಕರೆದುಕೊಂಡು ಹೋಗುತಿದ್ದರು. ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇರುವ ವೇಳೆ ಪ್ರಣಿತ್ ಕುಮಾರ್ ಮನೆಯ ಹೊರಗಡೆ ಅಂಗಳದಲ್ಲಿ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!