ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿ ಬಿದ್ದ ಮರ : ಮೆಮೋ ರೈಲು ಲೋಕೋ ಪೈಲಟ್‌ಗೆ ಗಾಯ

ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿ ಬಿದ್ದ ಮರ : ಮೆಮೋ ರೈಲು ಲೋಕೋ ಪೈಲಟ್‌ಗೆ ಗಾಯ

ಮಂಡ್ಯ: ಚಲಿಸುತ್ತಿದ್ದ ರೈಲಿನ ಮೇಲೆ ಮರ ಬಿದ್ದು ಲೋಕೋ ಪೈಲಟ್‌ಗೆ ಗಾಯವಾದ ಘಟನೆ ಮಂಡ್ಯದಲ್ಲಿ ಸಂಭವಿಸಿದೆ.

ಮೇ.13ರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಮೆಮೋ ರೈಲು ಫ್ಯಾಕ್ಟರಿ ವೃತ್ತದ ಬಳಿ ತಲುಪುತ್ತಿದ್ದಂತೆ ಮರ ರೈಲಿನ ಮುಂಭಾಗಕ್ಕೆ ಹೊಡೆದಿದೆ. ಇದರ ರಭಸಕ್ಕೆ ರೈಲಿನ ಕಿಟಕಿ ಗಾಜುಗಳು ಒಡೆದು ಲೋಕೋ ಪೈಲೆಟ್‌ನ ತಲೆಗೆ ಗಾಯವಾಗಿದೆ. ತಕ್ಷಣ ಪೈಲಟ್‌ ರೈಲು ನಿಲ್ಲಿಸಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿ ಎನ್.ಎಸ್.ಪ್ರಶಾಂತ್ ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ರೈಲಿನಲ್ಲಿ ಪ್ರಯಾಣಿಸುತ್ತಿದ್ದ 500ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಳಿಕ ವಿಶ್ವಮಾನವ ಪ್ಯಾಸೆಂಜರ್ ರೈಲಿನಲ್ಲಿ ಮೈಸೂರಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಯಿತು. ಬದಲಿ ರೈಲಿಗಾಗಿ ಪ್ರಯಾಣಿಕರು ಸುಮಾರು ಒಂದು ಗಂಟೆ ಕಾದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!