ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗರ್ಡಾಡಿ, ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು:

ಗರ್ಡಾಡಿ, ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು:

 

 

 

 

 

ಬೆಳ್ತಂಗಡಿ :  ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಲು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿಯಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!