ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಸಾವು

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಸಾವು

ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೇ.24ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ ಗೌಡರ ಪುತ್ರ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35) ಎಂಬವರು ಸಂಚರಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಮೇ.21ರಂದು ಇನ್ನೋವಾ ಕಾರು ಡಿಕ್ಕಿಯಾಗಿದ್ದು, ಈ ವೇಳೆ ಪ್ರಶಾಂತ್ ಅವರ ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿತ್ತು.

ತಕ್ಷಣ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ತಂದೆ,ತಾಯಿ, ಸಹೋದರ,ಸಹೋದರಿ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!