ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪರೂಪದ ರಾಜಕಾರಣಿ ವಸಂತ ಬಂಗೇರ: ಶಾಸಕ ಹರೀಶ್ ಪೂಂಜ ಸಂತಾಪ ಹೋರಾಟ ಮನೋಭಾವ, ಸಜ್ಜನಿಕೆ, ಸಹೃದಯಿ ವ್ಯಕ್ತಿತ್ವದ ನಾಯಕನೆಂದು ನುಡಿ ನಮನ ಸಲ್ಲಿಸಿದ ಶಾಸಕ ಪೂಂಜ

ಅಪರೂಪದ ರಾಜಕಾರಣಿ ವಸಂತ ಬಂಗೇರ: ಶಾಸಕ ಹರೀಶ್ ಪೂಂಜ ಸಂತಾಪ ಹೋರಾಟ ಮನೋಭಾವ, ಸಜ್ಜನಿಕೆ, ಸಹೃದಯಿ ವ್ಯಕ್ತಿತ್ವದ ನಾಯಕನೆಂದು ನುಡಿ ನಮನ ಸಲ್ಲಿಸಿದ ಶಾಸಕ ಪೂಂಜ

 

 

 

 

 

ಬೆಳ್ತಂಗಡಿ: - ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ, 1983-85ರ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳ ಜನತೆ ಮಂಗನ ಖಾಯಿಲೆಯಿಂದ ತತ್ತರಿಸಿದಾಗ ಮಿಡಿದ ಅವರ ಸಹೃದಯಿ ಮನ. ಬಗರ್ ಹುಕುಂ ಸಾಗುವಳಿದಾರರ ಪರವಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಅವರು ನಡೆಸಿದ ಜಾಥಾ ಇಂದಿಗೂ ಜನತೆಯ ಮನದಲ್ಲಿ ಹಚ್ಚ ಹಸಿರು.

ಅವರ ನಿಧನ ವೈಯಕ್ತಿಕವಾಗಿಯೂ ತಾಲೂಕಿನ ಜನತೆಗೂ ಅಪಾರ ದುಃಖವನ್ನು ತಂದಿದ್ದು, ದಿವಂಗತರಿಗೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಶಾಸಕ ಹರೀಶ್ ಪೂಂಜ ತನ್ನ ನುಡಿನಮನ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!