ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿವಮೊಗ್ಗ : ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆ: ಆಪರೇಷನ್ ಮೂಲಕ ಹೊರತೆಗೆದ ವೈದ್ಯರು

ಶಿವಮೊಗ್ಗ : ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆ: ಆಪರೇಷನ್ ಮೂಲಕ ಹೊರತೆಗೆದ ವೈದ್ಯರು

ಶಿವಮೊಗ್ಗ: ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾದ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಕಾರಾಗೃಹದಲ್ಲಿ ಬಂಧಿಯಾಗಿದ್ದ ಪರಶುರಾಮ್ @ ಪರ್ಸು @ ಚಿಂಗಾರಿ ಎಂಬಾತ ತನಗೆ ಹೊಟ್ಟೆ ನೋವು ಎಂದು ಕಳೆದ ಒಂದು ತಿಂಗಳಿನಿಂದ ಒದ್ದಾಡುತ್ತಿದ್ದ. ಕಾರಾಗೃಹದ ವೈದ್ಯರ ಬಳಿ ತೋರಿಸಿದರೂ ಹೊಟ್ಟೆ ನೋವು ಕಡಿಮೆಯಾಗಿರಲಿಲ್ಲ. ಬಳಿಕ ಮೆಗ್ಗಾನ್ ಆಸ್ಪತ್ರೆ ವೈದ್ಯರು ಪರೀಕ್ಷಿಸಿ ಹೊಟ್ಟೆಯಲ್ಲಿ ಏನಿದೆ ಎಂದು ಪ್ರಶ್ನಿಸಿದ್ದಾರೆ. ಆಗ ಆತ ಕಲ್ಲು ಇದೆ ಎಂದು ಹೇಳಿದ್ದಾನೆ. ಹೀಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಎಕ್ಸರೇ ಮಾಡಲಾಗಿದ್ದು ಆದರೂ ಹೊಟ್ಟೆಯಲ್ಲಿ ಏನಿದೆ ಎಂಬುದು ಸರಿಯಾಗಿ ತಿಳಿದು ಬಂದಿರಲಿಲ್ಲ. ಅಲ್ಲಿಂದ ವೈದ್ಯರು ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಪರಶುರಾಮ್ ಹೊಟ್ಟೆಯಲ್ಲಿ ಮೊಬೈಲ್ ಕಂಡುಬಂದಿದೆ. ಹೀಗಾಗಿ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರ ತೆಗೆದಿದ್ದಾರೆ. ಸದ್ಯ ಪರಶುರಾಮ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಈತ ಯಾವ ಕಾರಣಕ್ಕೆ ಮೊಬೈಲ್ ನುಂಗಿದ್ದ ಎಂಬುದು ತಿಳಿದು ಬಂದಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!