ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ‘ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆಯಾಗಬೇಕು ಅಂದುಕೊಂಡಿದ್ದೆ ಆದರೆ..’: ಕಾಲೇಜ್ ದಿನಗಳನ್ನು ನೆನಪಿಸಿ ಹಳೇ ಸ್ನೇಹಿತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತು

‘ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆಯಾಗಬೇಕು ಅಂದುಕೊಂಡಿದ್ದೆ ಆದರೆ..’: ಕಾಲೇಜ್ ದಿನಗಳನ್ನು ನೆನಪಿಸಿ ಹಳೇ ಸ್ನೇಹಿತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತು

ಮೈಸೂರು: ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟನೆಯಲ್ಲಿ ಕರ್ನಾಟಕ ಸಿಎಂ ತಮ್ಮ ಹಳೇ ಗೆಳತಿ ಬಗ್ಗೆ ಮಾತನಾಡಿದ್ದಾರೆ.

ಅಂತರ್ಜಾತಿ ಮದುವೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಅದಕ್ಕೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು. ನಮ್ಮ ಸರ್ಕಾರವೂ ಕೂಡ ಸಹಾಯ, ಸಹಕಾರ ನೀಡುತ್ತದೆ. ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ ಹೋಗಬೇಕಾದರೆ ಅಂತರ್ಜಾತಿ ವಿವಾಹ ಅಗತ್ಯ. ಜಾತಿ ವ್ಯವಸ್ಥೆಯು ಬಹಳ ಗಟ್ಟಿಯಾಗಿದೆ. ಇದರಿಂದ ಸಮಾಜ ಚಲನರಹಿತವಾಗಿದೆ. ಆರ್ಥಿಕ ಹಾಗೂ ಸಾಮಾಜಿಕ ಚಟುವಟಿಕೆ ಇಲ್ಲದಾಗ ಅಂತಹ ಸಮಾಜದಲ್ಲಿ ಚಲನೆ ಇರುವುದಿಲ್ಲ. ಅನೇಕರು ಸಮ ಸಮಾಜ ಮಾಡಲು ಪ್ರಯತ್ನ ಮಾಡಿದ್ದರೂ ಕೂಡ, ಸಂಪೂರ್ಣ ಯಶಸ್ವಿಯಾಗಿಲ್ಲ. ಅಂತರ್ಜಾತಿ ವಿವಾಹಗಳಿಂದ ಮಾತ್ರ ಜಾತಿ ನಾಶ ಸಾಧ್ಯ ಎಂದು ಹೇಳಿ ಬಳಿಕ ತಮ್ಮ ಹಳೇ ಗೆಳತಿಯನ್ನು ಮದುವೆಯಾಗುವ  ಕಾಲೇಜ್ ದಿನಗಳ ನೆನೆಪುಗಳನ್ನು ಹಂಚಿಕೊಂಡಿದ್ದಾರೆ.

‘ನನಗೂ ಕೂಡ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೇ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ, ಕೊನೆಗೆ ನಮ್ಮ ಜಾತಿಯವರನ್ನೇ ಮದುವೆಯಾಗಬೇಕಾದ ಪರಿಸ್ಥಿತಿ ಬಂತು’ ಎಂದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!