ಸಾಂದರ್ಭೀಕ ಚಿತ್ರ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರಕನ್ನಡ ಜಿಲ್ಲೆ ಯಲ್ಲೋ ಅಲರ್ಟ್, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.