ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೂ.09: ಅಳದಂಗಡಿಯಲ್ಲಿ 20ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ, ಸನ್ಮಾನ, ಮತ್ತು ಆರೋಗ್ಯ ಶಿಬಿರ ಕಾರ್ಯಕ್ರಮ: ಕನ್ನಡ ಚಲನಚಿತ್ರ ನಟ ಹಾಗೂ ಸಿರಿ ಬ್ರಾಂಡ್ ರಾಯಭಾರಿ ರಮೇಶ್ ಅರವಿಂದ್ ಆಗಮನ

ಜೂ.09: ಅಳದಂಗಡಿಯಲ್ಲಿ 20ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ, ಸನ್ಮಾನ, ಮತ್ತು ಆರೋಗ್ಯ ಶಿಬಿರ ಕಾರ್ಯಕ್ರಮ: ಕನ್ನಡ ಚಲನಚಿತ್ರ ನಟ ಹಾಗೂ ಸಿರಿ ಬ್ರಾಂಡ್ ರಾಯಭಾರಿ ರಮೇಶ್ ಅರವಿಂದ್ ಆಗಮನ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 20ನೇ ವರ್ಷದ ಉಚಿತ ಪುಸ್ತಕ ವಿತರಣೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ, ಮತ್ತು ಆರೋಗ್ಯ ಶಿಬಿರ ಕಾರ್ಯಕ್ರಮ ಜೂ 09 ಭಾನುವಾರ ಪೂರ್ವಾಹ್ನ 11 ಗಂಟೆಗೆ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ (ರಿ.) ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆ ವಹಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಚಾಲನೆ ನೀಡಲಿದ್ದಾರೆ. ಕನ್ನಡ ಚಲನ ಚಿತ್ರ ನಟ ಹಾಗೂ ಸಿರಿ ಬ್ರಾಂಡ್ ರಾಯಭಾರಿ ರಮೇಶ್ ಅರವಿಂದ್ ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಸಂಸದರಾದ ಕ್ಯಾ.ಬ್ರಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಹಾಗೂ ಪ್ರತಾಪ್ ಸಿಂಹ ನಾಯಕ್ , ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ನಡಕ್ಕರ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮರೋಡಿಯ ಆಡಳಿತ ಮೊಕ್ತೆಸರರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹಾಗೂ ಇನ್ನೂ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

http://prajaprakasha.com/?p=28099

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!