ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೇಪಾಳ ಮೂಲದ ಬಾಲಕಿ ಮಂಗಳೂರಿನಲ್ಲಿ ಆತ್ಮಹತ್ಯೆ: ಮಂಗಳೂರಲ್ಲೇ ಓದಿಸುವ ಪೋಷಕರ ನಿರ್ಧಾರಕ್ಕೆ ಕೋಪ: ಹಠಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ 16 ವರ್ಷದ ಬಾಲಕಿ!

ನೇಪಾಳ ಮೂಲದ ಬಾಲಕಿ ಮಂಗಳೂರಿನಲ್ಲಿ ಆತ್ಮಹತ್ಯೆ: ಮಂಗಳೂರಲ್ಲೇ ಓದಿಸುವ ಪೋಷಕರ ನಿರ್ಧಾರಕ್ಕೆ ಕೋಪ: ಹಠಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ 16 ವರ್ಷದ ಬಾಲಕಿ!

ಸಾಂದರ್ಭಿಕ ಚಿತ್ರ

ಮಂಗಳೂರು : ಶಾಲೆ ಸೇರ್ಪಡೆಯ ವಿಚಾರದಲ್ಲಿ ಪೋಷಕರ ನಿರ್ಧಾರಕ್ಕೆ ಕೋಪಗೊಂಡ 16 ವರ್ಷದ ಬಾಲಕಿಯೊರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಸಂಭವಿಸಿದೆ.

ನೇಪಾಳ ಮೂಲದ ರಾಮ್ ಶರಣ್ ಎಂಬುವರು ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳೊಂದಿಗೆ ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ತೊಕ್ಕೊಟ್ಟುವಿನಲ್ಲಿ ಕ್ಯಾಂಟೀನ್ ನಡೆಸಿ ಜೀವನ ಸಾಗಿಸುತ್ತಿದ್ದ ಇವರ ಎರಡನೇ ಮಗಳು ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಆಕೆಯನ್ನು ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ಅವಳನ್ನು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ಆಕೆ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದಳು.

ತನ್ನ ನಿರ್ಧಾರಕ್ಕೆ ಪೋಷಕರು ಒಪ್ಪಿಲ್ಲವೆಂದು ಜೂ.08ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಉಳ್ಳಾಲ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!