ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದಲಿತ ಮುಖಂಡ ಚಂದು ಎಲ್‌ರನ್ನು ಭೇಟಿಯಾದ ರಕ್ಷಿತ್ ಶಿವರಾಂ

ದಲಿತ ಮುಖಂಡ ಚಂದು ಎಲ್‌ರನ್ನು ಭೇಟಿಯಾದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಅನಾರೋಗ್ಯದಿಂದ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿರಿಯ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ , ದಸಂಸ (ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕ ಚಂದುಎಲ್‌ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ.19ರಂದು ಭೇಟಿಯಾದರು.

ಆಸ್ಪತ್ರೆಯಲ್ಲಿ ಚಂದು ಎಲ್‌ರವರ ಆರೋಗ್ಯ ವಿಚಾರಿಸಿದ ಅವರು ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆಗೆ ಚಂದುರವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿ ಚಂದುರವರ ಇಡೀ ಕುಟುಂಬದ ಜೊತೆಗೆ ಕಾಂಗ್ರೆಸ್ ಪಕ್ಷ ಯಾವಾಗಲೂ ಇರುತ್ತದೆ. ಯಾವುದೇ ಕಾರಣಕ್ಕೂ ಎದೆಗುಂದದಿರಿ ಎಂದು ಧೈರ್ಯ ತುಂಬಿದರು.

ಈ ವೇಳೆ ದಸಂಸ (ಅಂಬೇಡ್ಕರ್ ವಾದ) ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ವಸಂತ ಬಿ.ಕೆ, ಜಿಲ್ಲಾ ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯೂರು , ದಸಂಸ ಹಿರಿಯ ಮುಖಂಡ ಸಂಜೀವ ಆರ್ , ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಬೇಬಿ ಸುವರ್ಣ , ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ್ ಶಾಂತಿಕೋಡಿ ಸೇರಿದಂತೆ ಚಂದುರವರ ಕುಟುಂಬಸ್ಥರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!