Home › ಕಳೆಂಜ: ಅರಣ್ಯ ಪ್ರದೇಶ ಜಾಗದ ತಕರಾರು ಪ್ರಕರಣ: ಎಂಎಲ್‌ಎ ಹರೀಶ್ ಪೂಂಜ ಹಾಗೂ ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ವಿರುದ್ಧ ಚಾರ್ಜ್ ಶೀಟ್ : ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಗೆ ಸಲ್ಲಿಕೆ
ಕಳೆಂಜ: ಅರಣ್ಯ ಪ್ರದೇಶ ಜಾಗದ ತಕರಾರು ಪ್ರಕರಣ: ಎಂಎಲ್‌ಎ ಹರೀಶ್ ಪೂಂಜ ಹಾಗೂ ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ವಿರುದ್ಧ ಚಾರ್ಜ್ ಶೀಟ್ : ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಗೆ ಸಲ್ಲಿಕೆ
ONLINE PUDU / Monday, June 03, 2024
ಕಳೆಂಜ: ಅಮ್ಮಿನಡ್ಕದಲ್ಲಿ ಅರಣ್ಯ ಇಲಾಖೆ ಗೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ 2023 ಅ.7 ರಂದು ಅಕ್ರಮವಾಗಿ ಮನೆ ನಿರ್ಮಾಣ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಎಂಎಲ್‌ಎ ಹರೀಶ್ ಪೂಂಜ ಹಾಗೂ ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ವಿರುದ್ಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸರು ತನಿಖೆ ನಡೆಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರ 15 ಜನ ಸೇರಿ ಒಟ್ಟು 17 ಮಂದಿ ವಿರುದ್ಧ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1 ರಂದು ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ.