ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ: ಹೆಚ್ಚುವರಿ ಪರಿಹಾರದ ಭರವಸೆ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ: ಹೆಚ್ಚುವರಿ ಪರಿಹಾರದ ಭರವಸೆ

ಬೆಳ್ತಂಗಡಿ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜರವರು ಜೂ.29ರಂದು ಭೇಟಿ ನೀಡಿದ್ದಾರೆ.

ಕುಟುಂಬಸ್ಥರ ಜೊತೆ ಮಾತನಾಡಿದ ಅವರು, ಮೃತ ಪ್ರತೀಕ್ಷಾ ಶೆಟ್ಟಿ ಪೋಷಕರಿಗೆ ಸಾಂತ್ವನ ತಿಳಿಸಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕೆ ಆಗ್ರಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕೆ.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

ಘಟನೆಯ ವಿವರ ಶಿಬಾಜೆ ಗ್ರಾಮದ ಬರ್ಗುಲಾ ಎಂಬಲ್ಲಿ ಗಣೇಶ್ ಶೆಟ್ಟಿ ಮತ್ತು ರೋಹಿನಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಜೂ.27 ರ ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿAದ ರಸ್ತೆಗೆ ಬಂದಾಗ , ಸ್ಟೇ ವೈಯರ್ ಗೆ ವಿದ್ಯುತ್ ಸ್ವರ್ಶಿಸಿ ಅದು ನೀರಿಗೆ ಪ್ರವಾಹಿಸಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಕೊನೆಯುಸಿರೆಳೆದಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!