ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ: ವಿದ್ಯಾರ್ಥಿನಿ ನಾಪತ್ತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಉಜಿರೆ: ವಿದ್ಯಾರ್ಥಿನಿ ನಾಪತ್ತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

 

 

 

ಬೆಳ್ತಂಗಡಿ: ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ಹಾಸ್ಟೇಲ್ ನಿಂದ ಹೊರಟ ವಿದ್ಯಾರ್ಥಿನಿಯೋರ್ವಳು ವಾಪಾಸ್ಸಾಗದೆ ಕಾಣೆಯಾದ ಘಟನೆ ಉಜಿರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಯುವತಿಯೋರ್ವಳು ಉಜಿರೆಯ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದು ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ. ಮೇ.29 ರಂದು ಬೆಳಗ್ಗೆ 08.00 ಗಂಟೆಗೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದು, ಸಂಜೆ ತನಕ ಹಾಸ್ಟೇಲ್ ಗೂ ವಾಪಸ್ಸಾಗದೆ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ಕಾಣೆಯಾಗಿದ್ದಾಳೆ. ಈ ಬಗ್ಗೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯ ಸಹಾಯಕ ನಿಲಯ ಪಾಲಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!