ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿ ಸಾವು..!: ಕಾದಾಟದಲ್ಲಿ ಮೃತಪಟ್ಟ ಶಂಕೆ

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿ ಸಾವು..!: ಕಾದಾಟದಲ್ಲಿ ಮೃತಪಟ್ಟ ಶಂಕೆ

ಮೈಸೂರು: ಹುಲಿ ಸಂರಕ್ಷಿತ ಪ್ರದೇಶದಲ್ಲಿ 5ವರ್ಷದ ಗಂಡು ಹುಲಿ ಸಾವನ್ನಪ್ಪಿರುವ ಘಟನೆ ನಾಗರಹೊಳೆಯಲ್ಲಿ ಸಂಭವಿಸಿದೆ.

ಹುಣಸೂರು ವನ್ಯಜೀವಿ ವಲಯದ ಲಕ್ಷೀಪುರ ಕಳ್ಳಬೇಟೆ ತಡೆ ಶಿಬಿರದ ಗೋವಿಂದೇ ಗೌಡ ಕಂಡಿ ಅರಣ್ಯ ಪ್ರದೇಶದಲ್ಲಿ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಹುಲಿ ಕಳೇಬರ ಪತ್ತೆಯಾಗಿದೆ. ಸ್ಥಳಕ್ಕೆ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಳಿಕ ಮರಣೋತ್ತರ ಪರೀಕ್ಷೆ ಮಾಡಿ ಸ್ಥಳದಲ್ಲೇ ಕಳೇಬರವನ್ನು ಸುಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ಅವರು, “ಮೇಲ್ನೋಟಕ್ಕೆ ಕಾದಾಟದಲ್ಲಿ ಒಂದೆರಡು ದಿನಗಳ ಹಿಂದೆ ಹುಲಿ ಮೃತಪಟ್ಟಿರುವ ಶಂಕೆ ಇದೆ” ಎಂದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!