ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಳೇಕೋಟೆ ಲಾರಿಗೆ ಬೈಕ್ ಡಿಕ್ಕಿ ,ಸವಾರ ಸ್ಥಳದಲ್ಲೇ ಸಾವು.. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..!

ಹಳೇಕೋಟೆ ಲಾರಿಗೆ ಬೈಕ್ ಡಿಕ್ಕಿ ,ಸವಾರ ಸ್ಥಳದಲ್ಲೇ ಸಾವು.. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..!

 

 

 

 

 

ಬೆಳ್ತಂಗಡಿ: ಹಳೆಕೋಟೆ ಬಳಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿಯ ಹಳೇಕೋಟೆ ಬಳಿಯ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಲಾರಿಯಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯನ್ನು ಬಳ್ಳಮಂಜದ ನಿವಾಸಿ ಜಿ. ವಿನೋದ್   ಎಂದು ಗುರುತಿಸಲಾಗಿದೆ.  ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ರಸ್ತೆ ಅಪಘಾತಗಳು ತಾಲೂಕಿನಲ್ಲಿ  ಹೆಚ್ಚಾಗುತಿದ್ದು ಹಲವಾರು ಮಂದಿ ಸಾವನ್ನಪ್ಪಿದ್ದಾರೆ.ಇದಕ್ಕೆಲ್ಲ ಕಾರಣ ರಸ್ತೆ ಕಾಮಗಾರಿಯ ಅವ್ಯವಸ್ಥೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು ಎಂಬ ಪ್ರಶ್ನೆಯನ್ನು ಅಧಿಕಾರಿಗಳಲ್ಲಿ ಮಾಡುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!