ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ, ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ : ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು:

ಉಜಿರೆ, ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ : ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು:

 

 

 

 

 

ಬೆಳ್ತಂಗಡಿ : ಮಹಿಳೆಯೊಬ್ಬರ ಮೇಲೆ ಉಜಿರೆಯಲ್ಲಿರುವ ಬಟ್ಟೆ ಅಂಗಡಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಧರ್ಮಸ್ಥಳದ ಮಹಿಳೆಯೊಬ್ಬರ ಬಟ್ಟೆ ಅಂಗಡಿಗೆ  ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ನವೀನ್ ಕನ್ಯಾಡಿ ಎಂಬಾತ ಹಣಕಾಸಿನ ವಿಚಾರದಲ್ಲಿ ಏಕಾಏಕಿ ನುಗ್ಗಿ ಮರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಹೂವಿನ ವ್ಯಾಪಾರಿಯಾಗಿರುವ ನವೀನ್ ಕನ್ಯಾಡಿ ಎಂಬಾತ ಧರ್ಮಸ್ಥಳದ ಮಹಿಳೆಯಿಂದ ಸಾಲವಾಗಿ ಪಡೆದ ಹಣವನ್ನು ವಾಪಸ್ ಮಹಿಳೆ ಹಿಂದಿರುಗಿಸುವಂತೆ ಕೇಳಿದ್ದಕ್ಕೆ ಏಕಾಏಕಿ ಉಜಿರೆಯ ಮಹಿಳೆಯ ಬಟ್ಟೆ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಗಂಭೀರ ಹಲ್ಲೆ ಮಾಡಿರುವ  ಬಗ್ಗೆ ಆರೋಪ ಕೇಳಿ ಬಂದಿದ್ದು ಹಲ್ಲೆಯ ವಿಡಿಯೋ  ಅಂಗಡಿಯಲ್ಲಿದ್ದ ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು.ಅದಲ್ಲದೇ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮಹಿಳೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354 ,323,447,504,506 ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ನವೀನ್ ಕನ್ಯಾಡಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!