ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ, ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ : ಗಂಭೀರ ಗಾಯಗೊಂಡಿದ್ದ ಚಾಲಕ ಸಾವು:

ಉಜಿರೆ, ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ : ಗಂಭೀರ ಗಾಯಗೊಂಡಿದ್ದ ಚಾಲಕ ಸಾವು:

 

 

 

 

ಬೆಳ್ತಂಗಡಿ: ಉಜಿರೆಯಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಉಜಿರೆ ಕಾಲೇಜು ರಸ್ತೆಯ ಬೆಳಾಲ್ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿಭಾಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಬೆಳ್ತಂಗಡಿಯ ನಿವಾಸಿ ಪ್ರಮೋದ್ ಆರ್ ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.

 

 

 

ಅಪಘಾತ ನಡೆದ ಕೂಡಲೇ  ಅವರನ್ನು ಸ್ಥಳೀಯ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು ಅದರೆ ಮಂಗಳೂರಿಗೆ ತಲುಪುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ  ಕಾರಣ ತಿಳಿದು ಬಂದಿಲ್ಲ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಸ್ತೆ ಬದಿಯ ಬೀದಿ ದೀಪದ ಕಂಬಗಳು ಮುರಿದು ಬಿದ್ದಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!