ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ವಿಜಯೋತ್ಸವದಲ್ಲಿ ಇಬ್ಬರಿಗೆ ಚೂರಿ ಇರಿತ..!: ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಘಟನೆ: ಮೂವರು ಪೊಲೀಸ್ ವಶಕ್ಕೆ

ಬಿಜೆಪಿ ವಿಜಯೋತ್ಸವದಲ್ಲಿ ಇಬ್ಬರಿಗೆ ಚೂರಿ ಇರಿತ..!: ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಘಟನೆ: ಮೂವರು ಪೊಲೀಸ್ ವಶಕ್ಕೆ

ಸಾಂದರ್ಭಿಕ ಚಿತ್ರ

ಮಂಗಳೂರಿನಲ್ಲಿ : ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು  ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ.

ಜೂ.09ರಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನಲೆ ಬೋಳಿಯಾರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಜಯೋತ್ಸವ ಮುಗಿಸಿ ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಬಿಜೆಪಿ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ವೇಳೆ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ ಬಂದು ಬೋಳಿಯಾರ್ ಬಾರ್ ಬಳಿ ವಾಗ್ವಾದ ನಡೆಸಿ ಥಳಿಸಿದ್ದಾರೆ. ಇದರಲ್ಲಿ ಹರೀಶ್(41), ನಂದಕುಮಾರ್(24)ಗೆ ಚಾಕು ಇರಿಯಲಾಗಿದ್ದು ಮತ್ತೊಬ್ಬ ಕೃಷ್ಣ ಕುಮಾರ್ ಎಂಬಾತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದೆ.

ಚೂರಿ ಇರಿತಕ್ಕೊಳಗಾದ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಹಲವರಿಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!