ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಟ್ಟಡದ ಗೋಡೆ ಕುಸಿದು ಮಹಿಳೆ ಸಾವು..!

ಕಟ್ಟಡದ ಗೋಡೆ ಕುಸಿದು ಮಹಿಳೆ ಸಾವು..!

ಕಾರವಾರ: ಭಾರೀ ಮಳೆಗೆ ಕಟ್ಟಡದ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಅಸ್ನೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರವ ತೊರ್ಲೆಬಾಗ ಮಜಿರೆಯಲ್ಲಿ ಎಂಬಲ್ಲಿ ನಡೆದಿದೆ.

ಚಿತ್ತಾಕುಲದಲ್ಲಿ ಹಣ್ಣು ವ್ಯಾಪಾರ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಗುಲಾಬಿ ರಾಮಚಂದ್ರ ಮಾಂಜ್ರೇಕರ (70) ಇವರು ಗುರುವಾರ ಮಧ್ಯಾಹ್ನ ತಮ್ಮ ಮನೆಯ ಪಕ್ಕದಲ್ಲಿದ್ದ ಹಳೆಯ ಕಟ್ಟಡದಲ್ಲಿ ಹಸುಗಳಿಗೆ ಗಂಜಿ ನೀಡಲು ತೆರಳಿದ್ದರು. ಈ ವೇಳೆ, ಮಳೆಗೆ ನೆನೆದ ಮಣ್ಣಿನ ಗೋಡೆ ಕುಸಿದಿದ್ದು, ಮಣ್ಣಿನ ಗೋಡೆಯೊಳಗೆ ಮಹಿಳೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದರು. ಹೀಗಾಗಿ ಮಹಿಳೆಯನ್ನು ಸ್ಥಳೀಯರು ಗಮನಿಸಿರಲಿಲ್ಲ. ರಾತ್ರಿ ಸುರಿದ ಮಳೆಯಿಂದಾಗಿ ಗೋಡೆಯ ಮಣ್ಣು ತೊಳೆದು ಹೋಗಿದ್ದು ಶುಕ್ರವಾರ ಬೆಳಗ್ಗೆ ಮಹಿಳೆಯ ಕಾಲು ಸ್ಥಳೀಯರಿಗೆ ಕಾಣಿಸಿದೆ.

ಘಟನಾ ಸ್ಥಳಕ್ಕೆ ತಹಸೀಲ್ದಾರ ನಿಶ್ಚಲ ನರೋನಾ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!