Home › ಬೆಳ್ತಂಗಡಿ: ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ ವರ್ಗಾವಣೆ: ಹೆಚ್ಚುವರಿ ಪ್ರಭಾರ ಕರ್ತವ್ಯದಲ್ಲಿ ಭವಾನಿಶಂಕರ್ ಎನ್
ಬೆಳ್ತಂಗಡಿ: ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ ವರ್ಗಾವಣೆ: ಹೆಚ್ಚುವರಿ ಪ್ರಭಾರ ಕರ್ತವ್ಯದಲ್ಲಿ ಭವಾನಿಶಂಕರ್ ಎನ್
ONLINE PUDU / Wednesday, June 19, 2024
ಬೆಳ್ತಂಗಡಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ನೀಡಿರುವ ನಿರ್ದೇಶನಗಳನಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) ಗೆ ಸೇರಿದ ಗ್ರೂಪ್-ಎ(ಹಿರಿಯ ಶ್ರೇಣಿ) ವೃಂದದ ಉಪಕಾರ್ಯದರ್ಶಿ/ಯೋಜನಾ ನಿರ್ದೇಶಕರು ಹಾಗೂ ಗ್ರೂಪ್-ಎ(ಕಿರಿಯ ಶ್ರೇಣಿ) ವೃಂದ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.
ಚುನಾವಣೆ ಪ್ರಕ್ರಿಯೆಯು ಮುಕ್ತಾಯವಾದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಹಿಂದೆ ಹೊಂದಿದ್ದ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳತಕ್ಕದ್ದು ಎಂದು ಸೂಚಿಸಲಾಗಿದ್ದು ಬೆಳ್ತಂಗಡಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ ಅವರನ್ನು ವರ್ಗಾಯಿಸಿ ಮುಂದಿನ ಆದೇಶದವರೆಗೆ ಬೆಳ್ತಂಗಡಿಗೆ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದೆ.