ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಟ ದರ್ಶನ್ ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ..?: ಕೋರಮಂಗಲದ ಜಡ್ಜ್ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರ

ನಟ ದರ್ಶನ್ ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ..?: ಕೋರಮಂಗಲದ ಜಡ್ಜ್ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಮಾಡಿಕೊಂಡ ಎಡವಟ್ಟು ಅವರನನ್ನು ಪರಪ್ಪನ ಅಗ್ರಹಾರಕ್ಕೆ ಸೇರುವವರೆಗೆ ತಲುಪಿಸುತ್ತಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗುವ ಸಾಧ್ಯತೆಯೂ ಇದೆ.

ಕೊಲೆ ಪ್ರಕರಣದಲ್ಲಿ ಎ 1 ಮತ್ತು ಎ 2 ಆರೋಪಿಗಳಾಗಿರುವ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರನ್ನು ಇಂದು ಕೋರಮಂಗಲದ ಜಡ್ಜ್ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ. ಆ ಬಳಿಕ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ.

ಪ್ರಕರಣ ಸಂಬಂಧ ಬಹುತೇಕ ಶಿಕ್ಷೆ ಜಾರಿಯಾಗುವ ಸಾಧ್ಯತೆ ಇದೆ. ಹೀಗಾಗಿ ಸದ್ಯ ಇಬ್ಬರೂ ಆರೋಪಿಗಳು ಆತಂಕದಲ್ಲಿದ್ದಾರೆ. ಜೂನ್ 11ರಿಂದ ಜೂನ್ 17ರ ವರೆಗೆ ಪೊಲೀಸರು ದರ್ಶನ್ ಮತ್ತು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಜೂನ್ 17ರಂದು ಸರ್ಕಾರಿ ರಜೆ ಇರುವುದರಿಂದ ಪೊಲೀಸರು 2 ದಿನಗಳ ಮೊದಲೇ ಅಂದ್ರೆ, ಇಂದು ಮಧ್ಯಾಹ್ನದ ವೇಳೆಗೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂಬ ಮಾಹಿತಿ ಪೊಲೀಸ್ ಉನ್ನತ ಮೂಲಗಳಿಂದ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!