ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೆಜಿಸ್ಲೇಚರ್ ಚೆಸ್ ಕಪ್-2024 : ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನ

ಲೆಜಿಸ್ಲೇಚರ್ ಚೆಸ್ ಕಪ್-2024 : ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನ

ಬೆಂಗಳೂರು: ಲೆಜಿಸ್ಲೇಚರ್ ಚೆಸ್ - 2024, ಚದುರಂಗ ಸ್ಪರ್ಧೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಅಂತರಾಷ್ಟ್ರೀಯ ಚೆಸ್ ದಿನಾಚರಣೆ ಹಾಗೂ ಫಿಡೆ ಶತಮಾನೋತ್ಸವ ಅಂಗವಾಗಿ ಕರ್ನಾಟಕ ವಿಧಾನ ಮಂಡಲ ಹಾಗೂ ಭಾರತ ಚೆಸ್ ಫೆಡರೇಷನ್ ಸಹಯೋಗದಲ್ಲಿ ಜು.21ರಂದು ಶನಿವಾರ ಸ್ಪೀಕರ್ ಯುಟಿ ಖಾದರ್ ಅವರು ಪಂದ್ಯಾವಳಿ ಆಯೋಜಿಸಿದರು. 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದು, ಕೆಕೆಆರ್‌ಡಿಬಿ ಅಧ್ಯಕ್ಷರು, ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್ ಧರ್ಮಸಿಂಗ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಪಡೆದರು. ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತೃತೀಯ ಬಹುಮಾನ ಗಳಿಸಿದರು.

ವಿಜೇತರಿಗೆ ಸಿದ್ದರಾಮಯ್ಯ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!