ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ‘ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು: ಸುಮಾರು 9 ಜನ ಮಣ್ಣಿನಡಿ ಸಿಲುಕಿದ್ದಾರೆ’: ಶಿರೂರು ಬಳಿ ಗುಡ್ಡ ಕುಸಿತ : ಪ್ರತ್ಯಕ್ಷದರ್ಶಿ ವಿವರಿಸಿದ್ದು ಹೀಗೆ..

‘ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು: ಸುಮಾರು 9 ಜನ ಮಣ್ಣಿನಡಿ ಸಿಲುಕಿದ್ದಾರೆ’: ಶಿರೂರು ಬಳಿ ಗುಡ್ಡ ಕುಸಿತ : ಪ್ರತ್ಯಕ್ಷದರ್ಶಿ ವಿವರಿಸಿದ್ದು ಹೀಗೆ..

ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ದುರಂತ ಸಂಭವಿಸಿದೆ. ಈ ಘಟನೆಯನ್ನು ನೇರವಾಗಿ ನೋಡಿದ ವ್ಯಕ್ತಿಯೊಬ್ಬರು ‘ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು’ ಎಂದು ದುರಂತವನ್ನು ವಿವರಿಸಿದ್ದಾರೆ.

‘ಕಾರಿನಲ್ಲಿ ಒಂದು ಕುಟುಂಬ ಹೋಗುತಿತ್ತು. ಹಠಾತ್ ಆಗಿ ಕಾರು ನಿಲ್ಲಿಸಿ ನಿಧಾನಕ್ಕೆ ಹಿಂದೆ ತೆಗೆದುಕೊಳ್ಳುತ್ತಿದ್ದರು. ನಾನು ಹಿಂದಿನ ಗಾಡಿಯಲ್ಲಿ ಇದ್ದೆ. ಇಳಿದು ಬಂದು ನೋಡಿದೆ. ಗುಡ್ಡ ಕುಸಿಯುತ್ತಾ ಇತ್ತು. ದಿಢೀರಾಗಿ ಅಲ್ಲಿಂದ ಬೇರೆ ಕಡೆ ಹಾರಿದೆ. ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು. ಇಲ್ಲಿ ಒಂದು ಟೀ ಅಂಗಡಿ ಇತ್ತು. ಟಿ ಅಂಗಡಿಯಲ್ಲಿ ನಾಲ್ಕು ಜನ ಇದ್ದರು. ಗ್ಯಾಸ್ ಟ್ಯಾಂಕರ ಕೂಡ ಇಲ್ಲೇ ನಿಲ್ಲಿಸಿದ್ದರು. ಗ್ಯಾಸ್ ಟ್ಯಾಂಕರ್ ಕೆಳಗೆ ನದಿಗೆ ಬಿದ್ದಿದೆ. ಕಾರು ಮತ್ತು ಟೀ ಅಂಗಡಿಯಲ್ಲಿದ್ದವರು ಸೇರಿ ಸುಮಾರು ಒಂಬತ್ತು ಜನ ಮಣ್ಣಿನಡಿ ಸಿಲುಕಿದ್ದಾರೆ’ ಎಂದು ತಿಳಿಸಿದ್ದಾರೆ.

ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್‍ಡಿಆರ್‍ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!