ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ: ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ಬಾಲಕ ನಾಪತ್ತೆ: ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ..!

ಹಾಸನ: ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ಬಾಲಕ ನಾಪತ್ತೆ: ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ..!

ಹಾಸನ: ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಬಾಲಕನೋರ್ವ ಕಾಣೆಯಾಗಿ ಬಳಿಕ ಶವವಾಗಿ ಪತ್ತೆಯಾದ ಘಟನೆ ಜು.10ಂದು ಬಸವನಹಳ್ಳಿಯಲ್ಲಿ  ನಡೆದಿದೆ.

ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್ ಹಾಗೂ ರೂಪಾ ದಂಪತಿಯ ಪುತ್ರ ಕುಶಾಲ್ (12), ಜುಲೈ 9ರ ಸಂಜೆ ಮಕ್ಕಳೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಬಚ್ಚಿಟ್ಟುಕೊಳ್ಳಲು ಹೋಗಿ ಕಾಣೆಯಾಗಿದ್ದ. ಮಗು ವಾಪಸ್ ಬಾರದ ಹಿನ್ನೆಲೆಯಲ್ಲಿ ಪೋಷಕರು ಗಾಬರಿಗೊಂಡು ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಚಿರತೆ ಕಾಟ ಹೆಚ್ಚಾಗಿತ್ತು. ಹೀಗಾಗಿ, ಚಿರತೆ ಹೊತ್ತೊಯ್ದಿರಬಹುದು ಎಂಬ ಶಂಕೆಯಿಂದಲೂ ಪೋಷಕರ ಜೊತೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ನಡೆಸಿದ್ದರು. ಆದರೆ, ಬಾಲಕ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕೊನೆಗೆ ಮರುದಿನ ಪೊಲೀಸ್ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದರು.

ಜು.10ರ ಮಧ್ಯಾಹ್ನ ರೈಲ್ವೆ ಹಳಿ ಪಕ್ಕದಲ್ಲಿ ಬಾಲಕನ ಮೃತದೇಹ ಸಿಕ್ಕಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರಬಹುದೆಂದು ಬಿಂಬಿಸಲು ಕೊಲೆ ಮಾಡಿ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!