Home › ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ONLINE PUDU / Tuesday, July 16, 2024
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಕಳೆದ 6 ವರ್ಷಗಳಿಂದ ಜೈಲಿನಲ್ಲಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಅಮಿತ್ ದಿಗ್ವೇಕರ್, ಕೆ.ಟಿ. ನವೀನ್ ಕುಮಾರ್, ಸುರೇಶ್ ಹೆಚ್.ಎಲ್. ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಆದೇಶಿದೆ.
ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಇವರು ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದು, ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿದೆ.
ಹಿರಿಯ ವಕೀಲ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ಆರೋಪಿಗಳ ಪರ ವಾದ ಮಂಡಿಸಿದರು.