ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ರೀ-ರಿಲೀಸ್..!: ಕಾರಣ ತಿಳಿಸಿದ ವಿ.ಎಂ. ಶಂಕರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ರೀ-ರಿಲೀಸ್..!: ಕಾರಣ ತಿಳಿಸಿದ ವಿ.ಎಂ. ಶಂಕರ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲುವಾಸ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಅವರ ನಟನೆಯ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆಯಾಗಲು ಸಜ್ಜಾಗಿದ್ದು ಆಶ್ಚರ್ಯಕರವಾಗಿದೆ.

‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಮಾಡಲು ಗಾಂಧಿನಗರದಲ್ಲಿ ತಯಾರಿ ನಡೆದಿದೆ. ಆದರೆ ಇದು ಸಡನ್ ಪ್ಲ್ಯಾನ್ ಅಲ್ಲ ಎಂದು ವಿತಕರ ವಿ.ಎಂ. ಶಂಕರ್ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಈ ವಾರ ಕನ್ನಡದ ಬೇರೆ ಯಾವ ಸಿನಿಮಾ ಕೂಡ ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ಚಿತ್ರಮಂದಿರದ ಮಾಲೀಕರು ‘ಶಾಸ್ತ್ರಿ’ ಸಿನಿಮಾವನ್ನು ರೀ-ರಿಲೀಸ್ ಮಾಡಿ ಅಂತ ಮನವಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 25ರಿಂದ 50 ಚಿತ್ರಮಂದಿರಗಳಲ್ಲಿ ‘ಶಾಸ್ತ್ರಿ’ ಸಿನಿಮಾ ಬಿಡುಗಡೆ ಮಾಡುತ್ತೇವೆ. ಗಲಭೆ ಆಗಬಹುದು ಅಂತ ಕೆಲವು ಚಿತ್ರಮಂದಿರದ ಮಾಲಿಕರು ಯೋಚನೆ ಮಾಡುತ್ತಿದ್ದಾರೆ. ದರ್ಶನ್ ಜೈಲಿಗೆ ಹೋಗಿದ್ದಕ್ಕೂ ‘ಶಾಸ್ತ್ರಿ’ ಮರು ಬಿಡುಗಡೆ ಮಾಡುತ್ತಿರುವುದಕ್ಕೂ ಯಾವುದೇ ಸಂಬಂಧ ಇಲ್ಲ. 6 ತಿಂಗಳ ಹಿಂದೆಯೇ ಇದಕ್ಕೆ ತಯಾರಿ ಮಾಡಿಕೊಂಡಿದ್ದೆವು’ ಎಂದು ಹೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!