ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶುಕ್ರವಾರ ಕರಾವಳಿಯಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ..!, ಹವಾಮಾನ ಇಲಾಖೆ ಮುನ್ಸೂಚನೆ: ಗುರುವಾರ ಬಿಸಿಲಿನೊಂದಿಗೆ ಬಿಡುವು ನೀಡಿದ್ದ ಮಳೆ, ರಾಜ್ಯದ ವಿವಿಧೆಡೆ ಇನ್ನೂ ಹಲವು ದಿನ ವರುಣನ ಆರ್ಭಟ..!

ಶುಕ್ರವಾರ ಕರಾವಳಿಯಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ..!, ಹವಾಮಾನ ಇಲಾಖೆ ಮುನ್ಸೂಚನೆ: ಗುರುವಾರ ಬಿಸಿಲಿನೊಂದಿಗೆ ಬಿಡುವು ನೀಡಿದ್ದ ಮಳೆ, ರಾಜ್ಯದ ವಿವಿಧೆಡೆ ಇನ್ನೂ ಹಲವು ದಿನ ವರುಣನ ಆರ್ಭಟ..!

 

 

ಬೆಳ್ತಂಗಡಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಪ್ರತ್ಯೇಕ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಜುಲೈ 16ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!