ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್: ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ಎಡವಟ್ಟು..!

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್: ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ಎಡವಟ್ಟು..!

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು ಈಗಾಗಲೇ ಪೊಲೀಸರು ದೂರವಾಣಿ ಕರೆ ಮಾಡಿ ರಕ್ಷಿತ್ ಶೆಟ್ಟಿ ಬಳಿ ಮಾತನಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ. ಈ ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.

ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!