ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: ಪೊಲೀಸ್ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯಿಂದ ಉಳಿದ ಮೂರು ಜೀವಗಳು

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: ಪೊಲೀಸ್ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯಿಂದ ಉಳಿದ ಮೂರು ಜೀವಗಳು

ಶಿವಮೊಗ್ಗ: ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಿಸಿದ ಘಟನೆ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ಜು.22ರಂದು ಸಂಭವಿಸಿದೆ.

ಸಾಗರ ಪಟ್ಟಣದ ಅಣಲೇಕೊಪ್ಪದ ನಿವಾಸಿ 26 ವರ್ಷದ ಗೃಹಿಣಿ ತನ್ನ 13 ವರ್ಷದ ಮಗಳು ಹಾಗೂ 4 ವರ್ಷದ ಮಗನೊಂದಿಗೆ ಕುಗ್ವೆಗೆ ಸ್ಕೂಟಿಯಲ್ಲಿ ಬಂದು, ರಸ್ತೆ ಬದಿ ವಾಹನ ನಿಲ್ಲಿಸಿ, ಮೊಬೈಲ್ ಹಾಗೂ ಚಪ್ಪಲಿಯನ್ನು ಬಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ತಡೆದು ಸಮಾಧಾನಪಡಿಸಿ ವಾಪಸ್ ಕಳುಹಿಸಿದರು. ಅಲ್ಲಿಂದ ಹೋದ ಆಕೆ ಪುನಃ ಹೊಳೆ ಬದಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಅದೇ ವ್ಯಕ್ತಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಹೆಡ್ ಕಾನ್ಸ್ಟೇಬಲ್ ಶಿವರುದ್ರಯ್ಯ ಹಾಗೂ ಚಾಲಕ ಶಿವಾನಂದ ಅವರು ನೀರಿನಲ್ಲಿ ಮುಳುಗಲು ಯತ್ನಿಸುತ್ತಿದ್ದ ಗೃಹಿಣಿ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!