ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರೀತಿಗೆ ಪೋಷಕರ ವಿರೋಧ: ಕೆರೆಗೆ ಹಾರಿ ಪ್ರಾಣಕಳೆದುಕೊಂಡ ಪ್ರೇಮಿಗಳು..!

ಪ್ರೀತಿಗೆ ಪೋಷಕರ ವಿರೋಧ: ಕೆರೆಗೆ ಹಾರಿ ಪ್ರಾಣಕಳೆದುಕೊಂಡ ಪ್ರೇಮಿಗಳು..!

ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದ ಯುವ ಪ್ರೇಮಿಗಳು ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (25) ಸೂಸೈಡ್ ಮಾಡಿಕೊಂಡ ಜೋಡಿ. ವಿದ್ಯಾರ್ಥಿನಿ ಪೋಷಕರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇಬ್ಬರೂ ನಾಪತ್ತೆಯಾಗಿದ್ದರು. ಬಳಿಕ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಅಂಜನಾ ಮತ್ತು ಶ್ರೀಕಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಹುಡುಕಾಟದ ಸಂದರ್ಭದಲ್ಲಿ ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದ್ದು, ಶವವನ್ನು ಪೊಲೀಸರು ಮೇಲೆತ್ತಿದ್ದಾರೆ. ಇದೇ ವೇಳೆ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರೋದಿಲ್ಲ. ಆದರೆ ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿAದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯುವ ನಿರ್ಧಾರ ಮಾಡಿದ್ದಾರೆ ಎಂದು ಡಿಸಿಪಿ ಲೋಕೇಶ್ ಹೇಳಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಕೆರೆ ಬಳಿ ನಿಂತಿದ್ದ ಆಟೋದಲ್ಲಿ ಮೊಬೈಲ್ ಸಿಕ್ಕಿದ್ದು, ಅದರಲ್ಲಿ ಸಾವಿಗೆ ಕಾರಣ ತಿಳಿಸಿರುವ ವಿಡಿಯೋವೊಂದು ಪೊಲೀಸರಿಗೆ ಸಿಕ್ಕಿದೆ. ವಿಡಿಯೋದಲ್ಲಿ ಯುವತಿ ಅಂಜನಾ, ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!