ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಬಸ್ಸಿನ ಚಕ್ರ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಬಸ್ಸಿನ ಚಕ್ರ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಬಾಳೆಹೊನ್ನೂರು: ಚಲಿಸುತ್ತಿದ್ದಾಗಲೇ ಬಸ್ಸಿನ ಎರಡೂ ಚಕ್ರ ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್‌ನಲ್ಲಿ ಜು.17ರಂದು ನಡೆದಿದೆ.

ಮಂಗಳವಾರ ರಾತ್ರಿ ಖಾಸಗಿ ಬಸ್ಸು ಬೆಂಗಳೂರಿನಿಂದಹೊರಟು ಶೃಂಗೇರಿಗೆ ಬರುತ್ತಿದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್ ಬಳಿ ಬರುತ್ತಿದ್ದಂತೆ ಹಿಂಬದಿಯ ಎರಡೂ ಚಕ್ರ ಕಳಚಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಕ್ರ ಕಳಚುವ ಸಮಯದಲ್ಲಿ ಮಳೆ ಬರುತ್ತಿದ್ದು ಬಸ್ಸು ನಿಧಾನವಾಗಿ ಸಂಚರಿಸುತ್ತಿತ್ತು. ಒಂದು ವೇಳೆ ಈ ಘಟನೆ ಘಾಟಿ ಪ್ರದೇಶದಲ್ಲಿ ಸಂಭವಿಸಿದ್ದರೆ ಮಹಾ ದುರಂತವೇ ನಡೆಯುವ ಸಾಧ್ಯತೆ ಇತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!