ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆಯೂ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ನದಿಗಳ, ತೊರೆ, ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.