ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು . ರೈಲ್ವೆ ಮಾರ್ಗದ ಬೇಡಿಕೆ ಇಟ್ಟ ಶಾಸಕ ಹರೀಶ್ ಪೂಂಜ:

ಬೆಳ್ತಂಗಡಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು . ರೈಲ್ವೆ ಮಾರ್ಗದ ಬೇಡಿಕೆ ಇಟ್ಟ ಶಾಸಕ ಹರೀಶ್ ಪೂಂಜ:

 

 

 

ಬೆಳ್ತಂಗಡಿ: ಸುಬ್ರಹ್ಮಣ್ಯ, ಧರ್ಮಸ್ಥಳ ,ಕಾರ್ಕಳ , ಉಡುಪಿ ಕೊಲ್ಲೂರು, ಮಾರ್ಗವಾಗಿ ರೈಲ್ವೆ ಸಂಪರ್ಕವನ್ನು ಮಾಡುವಂತೆ ಸಚಿವ ಸೋಮಣ್ಣ ಅವರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಡಿಕೆ ಇಟ್ಟರು. ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು, ಉಡುಪಿ ಹಾಗೂ ಇತರ ಧಾರ್ಮಿಕ ಕ್ಷೇತ್ರಗಳಿಗೆ ದೇಶದ ವಿವಿಧ ಕಡೆಗಳಿಂದ ಸಾವಿರಾರು ಭಕ್ತರು ಆಗಮಿಸುತಿದ್ದು ಈ ನಿಟ್ಟಿನಲ್ಲಿ ಭಕ್ತಾಧಿಗಳ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ರೈಲ್ವೆ ಸಂಪರ್ಕದ ಅವಶ್ಯಕತೆ ಇದೆ. ಇದನ್ನು ಮಾನ್ಯ ಸಚಿವರು ಈಡೇರಿಸಿಕೊಡಬೇಕು ಅವರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯು ಶಕ್ತಿ ನೀಡಲಿ ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!