ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರವಾರ: ಕಂಟೇನರ್ ಸಾಗಿಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ: ಸಮುದ್ರ ಮಧ್ಯೆ ಹೊತ್ತಿ ಉರಿದ ಕಂಟೇನರ್‌ಗಳು: ರಕ್ಷಣಾ ಕಾರ್ಯಚರಣೆಯಲ್ಲಿ ಡಾರ್ನಿಯರ್ ಏರ್‌ಕ್ರಾಫ್ಟ್, ಸಚೇತ್, ಸುಜೀತ್, ಸಾಮ್ರಾಟ್ ಹಡಗುಗಳು

ಕಾರವಾರ: ಕಂಟೇನರ್ ಸಾಗಿಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ: ಸಮುದ್ರ ಮಧ್ಯೆ ಹೊತ್ತಿ ಉರಿದ ಕಂಟೇನರ್‌ಗಳು: ರಕ್ಷಣಾ ಕಾರ್ಯಚರಣೆಯಲ್ಲಿ ಡಾರ್ನಿಯರ್ ಏರ್‌ಕ್ರಾಫ್ಟ್, ಸಚೇತ್, ಸುಜೀತ್, ಸಾಮ್ರಾಟ್ ಹಡಗುಗಳು

ಕಾರವಾರ: ಕಂಟೇನರ್ ಸಾಗಿಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಘಟನೆ ಕಾರವಾರದಿಂದ 50 ನಾಟಿಕಲ್ ಮೈಲಿ ದೂರದ ಸಮುದ್ರದ ಮಧ್ಯೆ ಸಂಭವಿಸಿದೆ.

ಎಂ.ವಿ. ಮಾರ್ಸ್ಕ್ ಫ್ರಾಂಕ್ ಫರ್ಟ್ ಹೆಸರಿನ ಕಂಟೈನರ್ ಸಾಗಿಸುವ ಹಡಗು ಜು. 2ರಂದು ಮಲೇಷಿಯಾದಿಂದ ಹೊರಟಿತ್ತು. ಜು. 21ಕ್ಕೆ ಶ್ರೀಲಂಕಾಗೆ ತಲುಪಬೇಕಿತ್ತು. ಆದರೆ, ಕಾರವಾರ ತೀರದ ಸಮುದ್ರ ಮಧ್ಯ ಇದ್ದಕ್ಕಿದ್ದಂತೆ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಕಂಟೇನರ್‌ಗಳಿಗೆ ಅಗ್ನಿ ಆವರಿಸಿದೆ.

ಅಗ್ನಿ ಅವಘಡದ ಬಗ್ಗೆ ಮುಂಬೈನ ಮೆರಿಟೈಮ್ ರೆಸ್ಕ್ಯೂ ಕೋಆರ್ಡಿನೇಶನ್ ಸೆಂಟರ್‌ಗೆ ಮಾಹಿತಿ ರವಾನೆಯಾಗಿದ್ದು, ಅಲ್ಲಿಂದ ಬಂದ ಸಂದೇಶದ ಮೇರೆಗೆ ಭಾರತೀಯ ಕೋಸ್ಟ್ ಗಾರ್ಡ್ನ ಡಾರ್ನಿಯರ್ ಏರ್‌ಕ್ರಾಫ್ಟ್, ಸಚೇತ್, ಸುಜೀತ್, ಸಾಮ್ರಾಟ್ ಹೆಸರಿನ ಹಡಗುಗಳು ಹಾಗೂ ಒಂದು ಅಡ್ವಾನ್ಡ್ಸ್  ಲೈಟ್ ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!