ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ..!: ಶಿರಾಡಿಘಾಟ್‌ನಲ್ಲಿ ತಡರಾತ್ರಿ ಘಟನೆ: ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ..!: ಶಿರಾಡಿಘಾಟ್‌ನಲ್ಲಿ ತಡರಾತ್ರಿ ಘಟನೆ: ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಶಿರಾಡಿಘಾಟ್ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದೆ.

ಶಿರಾಡಿಘಾಟ್‌ನಲ್ಲಿ ಜು.17ರ ಮಧ್ಯಾಹ್ನದಿಂದಲೇ ಗುಡ್ಡ ಕುಸಿಯಲು ಆರಂಭಿಸಿತ್ತು. ಹೀಗಾಗಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದು ಭಾರೀ ಪ್ರಮಾಣದ ಮಣ್ಣು ಬಿದ್ದಿದೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗುಡ್ಡ ಕುಸಿತದಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಈಗಾಗಲೆ ಮಣ್ಣು ತೆರವುಗೊಳಿಸಲಾಗುತ್ತಿದ್ದು ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!