ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ಧರ್ಮಸ್ಥಳಕ್ಕೆ ಭೇಟಿ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ ಅವರು ಜು.08ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದಿದ್ದಾರೆ.

ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಆಗಮಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೂತನವಾಗಿ ಆಯ್ಕೆಯಾದ ಎಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಅಭಿನಂದಿಸಿದರು.

ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿಗಳಾದ ಉಮಾಪತಿ , ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ರಾಘವೇಂದ್ರ , ಜಂಟಿ ಕಾರ್ಯದರ್ಶಿಗಳಾದ ಹನುಮಂತರಾಯಪ್ಪ , ಮೂಡ್ಯಾ ಚಂದ್ರು ಕುಕ್ಕುಟ ಮಹಾ ಮಂಡಳಿ ಅಧ್ಯಕ್ಷರು, ಹಾಗು ನಿರ್ದೇಶಕರುಗಳಾದ ಪುಟ್ಟಸ್ವಾಮಿ , ಡಾಕ್ಟರ್ ಆಂಜನಪ್ಪ, ರಘುಗೌಡ ಹಾಸನ ಜೊತೆಯಲ್ಲಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!