ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ: ಮೈಸೂರಿನಲ್ಲಿ ಆರೋಗ್ಯಾಧಿಕಾರಿಯೇ ಡೆಂಗ್ಯೂ ಜ್ವರಕ್ಕೆ ಬಲಿ..!

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ: ಮೈಸೂರಿನಲ್ಲಿ ಆರೋಗ್ಯಾಧಿಕಾರಿಯೇ ಡೆಂಗ್ಯೂ ಜ್ವರಕ್ಕೆ ಬಲಿ..!

 

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಹುಣಸೂರು ತಾಲೂಕಿನಲ್ಲಿ ಸಂಭವಿಸಿದೆ.

ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯಾಧಿಕಾರಿ 35 ವರ್ಷದ ನಾಗೇಂದ್ರ ಅವರು ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದ ಇವರು ಜು.01ರಂದು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.

ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ. ಈಗಾಗಲೇ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಪ್ರತಿಯೊಂದು ತಾಲೂಕಿನಲ್ಲೂ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮಾಡುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!