ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಾಲಾ ಮೈದಾನದಲ್ಲಿ ಶೈಕ್ಷಣಿಕೇತರ ಚಟುವಟಿಕೆ ನಿಷೇಧ: ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ: ಸುತ್ತೋಲೆ ವಾಪಸ್ ಪಡೆಯುವಂತೆ ಒತ್ತಾಯ: ರಾಜ್ಯಪಾಲರಿಗೆ ಮನವಿ

ಶಾಲಾ ಮೈದಾನದಲ್ಲಿ ಶೈಕ್ಷಣಿಕೇತರ ಚಟುವಟಿಕೆ ನಿಷೇಧ: ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ: ಸುತ್ತೋಲೆ ವಾಪಸ್ ಪಡೆಯುವಂತೆ ಒತ್ತಾಯ: ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಶಾಲೆಗಳ ಮೈದಾನದಲ್ಲಿ ಯಾವುದೇ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ ಎಂಬ ಆದೇಶದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಜು.22ರಂದು ಪ್ರತಿಭಟನೆ ನಡೆದಿದೆ.

ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ‘ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ಸಾರ್ವಜನಿಕವಾಗಿ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆ ನಡೆಸಲಾಗುತ್ತಿತ್ತು. ಇದಕ್ಕೆ ಅಡ್ಡಗಾಲು ಹಾಕಿರುವುದು ಖಂಡನೀಯ, ಸುತ್ತೋಲೆಯನ್ನು ವಾಪಸ್ ಪಡೆಯಬೇಕು ಎಂದು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಾಂಕೇತಿಕವಾಗಿ ಭಜನೆ ನಡೆಸುವುದರ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ರೈತಮೋರ್ಚ ಅಧ್ಯಕ್ಷ ವಿಜಯ್ ಗೌಡ, ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಕಾಶ್ ಕಡಮಾಜೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸಹಿತ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರು, ಇನ್ನೂ ಅನೇಕರು ಭಾಗವಹಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!