ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಟೀಲು ಕ್ಷೇತ್ರಕ್ಕೆ ಬಾಲಿವುಡ್ ನಿರ್ದೇಶಕಿ ಏಕ್ತಾ ಕಪೂರ್ ಭೇಟಿ: ಶ್ರೀ ದುರ್ಗಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ: ದೇವಿಯ ವಿಶೇಷ ವಸ್ತ್ರ ನೀಡಿ ಕ್ಷೇತ್ರದ ವತಿಯಿಂದ ಗೌರವ

ಕಟೀಲು ಕ್ಷೇತ್ರಕ್ಕೆ ಬಾಲಿವುಡ್ ನಿರ್ದೇಶಕಿ ಏಕ್ತಾ ಕಪೂರ್ ಭೇಟಿ: ಶ್ರೀ ದುರ್ಗಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ: ದೇವಿಯ ವಿಶೇಷ ವಸ್ತ್ರ ನೀಡಿ ಕ್ಷೇತ್ರದ ವತಿಯಿಂದ ಗೌರವ

ಕಟೀಲು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಿರ್ದೇಶಕಿ ಹಾಗೂ ನಿರ್ಮಾಪಕಿ ಏಕ್ತಾ ಕಪೂರ್ ಜು.19ರಂದು ಭೇಟಿ ನೀಡಿದ್ದಾರೆ.

ತಮ್ಮ ಕುಟುಂಬದ ಜೊತೆ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿರುವ ಅವರು ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ವತಿಯಿಂದ ದೇವಿಯ ವಿಶೇಷ ವಸ್ತ್ರ ನೀಡಿ ಅವರನ್ನು ಗೌರವಿಸಲಾಯಿತು.

ಕೆಲ ಹೊತ್ತು ದೇವಸ್ಥಾನದಲ್ಲಿ ತನ್ನ ಕುಟುಂಬದ ಜೊತೆ ಸಮಯ ಕಳೆದ ಅವರು ನಂತರ ಅಲ್ಲಿಂದ ಈ ಕ್ಷೇತ್ರದ ಹತ್ತಿರದಲ್ಲೇ ಇರುವ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿಯೂ ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!